ಕಾಸರಗೋಡು ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಉದ್ಘಾಟನೆ
ಕಾಸರಗೋಡು, ಎ.16: ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕುಟುಂಬ ಆರೋಗ್ಯ ಕೇಂದ್ರವಾಗಿ ಪರಿವರ್ತಿಸುವ ಗುರಿಯನ್ನು ಸರಕಾರ ಹೊಂದಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ . ಕೆ ಶೈಲಜಾ ಹೇಳಿದರು.
ಕಾಸರಗೋಡು ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಇದಕ್ಕಾಗಿ ಏಳು ಜಿಲ್ಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುರುತಿಸಲಾಗಿದೆ. ಎಂಟು ಜಿಲ್ಲೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆ ಗೇರಿಸಲಾಗುವುದು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗಮನ ನೀಡಲಾಗುವುದು. ಸಂಘ ಸಂಸ್ಥೆ ಮತ್ತು ಜನರ ಸಹಭಾಗಿತ್ವದೊಂದಿಗೆ ಬದಲಾವಣೆ ತರಲಾಗುವುದು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಇ. ಚಂದ್ರಶೇಖರನ್ , ಸಂಸದ ಪಿ. ಕರುಣಾಕರನ್ ವಿವಿಧ ಘಟಕವನ್ನು ಉದ್ಘಾಟಿಸಿದರು.
ಈ ಸಂದರ್ಭ ಉದುಮ ಶಾಸಕ ಕೆ . ಕುಞ ರಾಮನ್ , ಡಾ.ರಾಮಚಂದ್ರ , ಮುಖಂಡರಾದ ಕೆ.ಕೃಷ್ಣನ್ ನಂಬ್ಯಾರ್, ಜ್ಯೋತಿ ಬಸು, ಪಿ. ಮುಹಮ್ಮದ್ ಕುoಞಿ ಮಾಸ್ಟರ್, ಹಕೀಮ್ ಕುನ್ನಿಲ್ , ಬಿ. ಕುoಞಿ ಕೃಷ್ಣನ್ , ಸಿ.ವಿ. ದಾಮೋದರನ್, ಡಾ.ಸುನಂದಾ ನಂದನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ಪಿ. ದಿನೇಶ್ ಕುಮಾರ್ ಮಾತನಾಡಿದರು