ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಕ್ತದಾನ ಶಿಬಿರ
Update: 2017-04-16 21:14 IST
ಮಂಗಳೂರು, ಎ.16: ನಗರ ಹೊರವಲಯದ ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ನೆಸ್ಸೆಸ್ ಮತ್ತು ರೆಡ್ ಕ್ರಾಸ್ ಘಟಕದ ವತಿಯಿಂದ ಕೆ.ಎಂ.ಸಿ. ಮಂಗಳೂರು ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ಅಧ್ಯಕ್ಷತೆಯಲ್ಲಿ ನಡೆದ ಶಿಬಿರವನ್ನು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಪ್ರಿಯಾ ವಿ. ಫ್ರ್ಯಾಂಕ್ ಉದ್ಘಾಟಿಸಿದರು.
ಕಾಲೇಜಿನ ಆಡಳಿತಾಧಿಕಾರಿ ಎಂ. ಗಣೇಶ್ ಕಾಮತ್ ಉಪಸ್ಥಿತರಿದ್ದರು. ಕೆ.ಎಂ.ಸಿ. ಆಸ್ಪತ್ರೆಯ ಡಾ. ಶ್ರೀಜಿತ್ ಚಕ್ರವರ್ತಿ ರಕ್ತದಾನದ ಮಹತ್ವದ ಕುರಿತು ವಿವರಿಸಿದರು. ಎನ್ನೆಸ್ಸೆಸ್ ಘಟಕದ ಸಹಪ್ರಾಧ್ಯಾಪಕ ನಾರಾಯಣ ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.