ಅಲೋಶಿಯಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರೆ.ಫಾ.ಡಾ.ಪ್ರವೀಣ್ ಮಾರ್ಟಿಸ್ ಅಧಿಕಾರ ಸ್ವೀಕಾರ

Update: 2017-04-17 10:24 GMT

ಮಂಗಳೂರು, ಎ.17: ನಗರದ ಸಂತ ಅಲೋಶಿಯಸ್ (ಸ್ವಾಯತ್ತ) ನೂತನ ಪ್ರಾಂಶುಪಾಲರಾಗಿ ರೆ.ಫಾ.ಡಾ.ಪ್ರವೀಣ್ ಮಾರ್ಟಿಸ್ ಅಧಿಕಾರ ಸ್ವೀಕರಿಸಿದ್ದಾರೆ.

ಕಳೆದ 10 ವರ್ಷಗಳಿಂದ ಪ್ರಾಂಶುಪಾಲರಾಗಿದ್ದ ರೆ.ಫಾ.ಸ್ವೀಬರ್ಟ್ ಡಿಸಿಲ್ವಾ ಸೇವೆಯಿಂದ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ರೆ.ಫಾ.ಡಾ.ಪ್ರವೀಣ್ ಮಾರ್ಟಿಸ್ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದಾರೆ. 

ಉಡುಪಿ ಶಂಕರಪುರದವರಾದ ಪ್ರವೀಣ್ ಮಾರ್ಟಿಸ್ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಹಾಗೂ ಬೆಂಗಳೂರಿನ ಸಂತ ಜೋಸೆಫರ ಕಾಲೇಜಿನಲ್ಲಿ ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬೆಲ್ಜಿಯಂ ದೇಶದ ನಮೂರ್ ವಿಶ್ವವಿದ್ಯಾನಿಲಯದಿಂದ ರಸಾಯನ ಶಾಸ್ತ್ರಕ್ಕೆ ಸಂಬಂಧಪಟ್ಟ ನ್ಯಾನೋ ಟ್ಯೂಬ್ಸ್ ಹಾಗೂ ನ್ಯಾನೋ ಕ್ರಿಸ್ಟಲ್ಸ್ ವಿಷಯದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ.

2013-15 ಎರಡು ವರ್ಷ ಬೆಂಗಳೂರಿನ ಸಂತ ಜೋಸೆಫ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಂತರ ಸಂತ ಅಲೋಶಿಯಸ್ ಕಾಲೇಜಿಗೆ ವರ್ಗಾವಣೆಗೊಂಡು ಅನೇಕ ಆಡಳಿತಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸಂಶೋಧನಾ ಕ್ಷೇತ್ರದಲ್ಲಿ ಉತ್ತಮ ಕೆಲಸಮಾಡಿರುವ ಇವರು, ಅಂತರಾಷ್ಟ್ರೀಯ ಮಟ್ಟದಲ್ಲಿ 12 ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ದೇಶ ವಿದೇಶಗಳಲ್ಲಿ ಅನೇಕ ಸೆಮಿನಾರ್, ಕಾನ್ಫರೆನ್ಸ್ ಭಾಗವಹಿಸಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ.

15 ಬಾರಿ ಅಂತರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಿ ಅಧ್ಯಯನ ಹಾಗೂ ಸಂಶೋಧನಾ ಚಟವಟಿಕೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News