ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ಗೆ ಅವಮಾನ: ದೂರು ದಾಖಲು
Update: 2017-04-17 22:04 IST
ಬ್ರಹ್ಮಾವರ, ಎ.17: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.14ರಂದು ಶ್ರೀಕಾಂತ ನಾಯಕ್ ಎಂಬಾತ ಫೇಸ್‌ಬುಕ್‌ನಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವುದಾಗಿ ಚಂದ್ರ ಅಲ್ತಾರ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.