×
Ad

​ಎಸ್ಸೈ ಸೇರಿ ಇಬ್ಬರು ಎಸಿಬಿ ಬಲೆಗೆ

Update: 2017-04-17 22:33 IST

ಬೆಂಗಳೂರು, ಎ.17: ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರ ಹೆಸರನ್ನು ಕೈಬಿಡಲು ಲಂಚ ಕೇಳಿದ ಆರೋಪದ ಮೇಲೆ ಎಸ್ಸೈ ಸೇರಿ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಲ್.ಶ್ರೀನಿವಾಸ್ ಹಾಗೂ ಠಾಣಾ ಬರಹಗಾರ ಎಚ್.ಸಿ.ವೆಂಕಟೇಶ್ ಎಂಬವರ ವಿರುದ್ಧ ಎಸಿಬಿ ಪ್ರಕರಣ ದಾಖಲಿಸಿದೆ.

ನಗರದ ಹುಳಿಮಾವು ನಿವಾಸಿಯೊಬ್ಬರ ಸೋದರ ಸಂಬಂಧಿಯ ವಿರುದ್ಧ ಚೆಕ್ ಕಳ್ಳತನ ಆರೋಪದಲ್ಲಿ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಆರೋಪಿಗಳಾದ ಎಸ್ಸೈ ಎಲ್.ಶ್ರೀನಿವಾಸ್ ಮತ್ತು ವೆಂಕಟೇಶ್ ಸೋದರ ಸಂಬಂಧಿಯ ಹೆಸರನ್ನು ಪ್ರಕರಣದಿಂದ ಕೈಬಿಡಲು 25 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆಯಿಟ್ಟಿದರು. ಈ ಸಂಬಂಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು.

ಸೋಮವಾರ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳ ತಂಡ, ಆರೋಪಿಗಳನ್ನು ಲಂಚ ಸ್ವೀಕರಿಸುತ್ತಿದ್ದ ವೇಳೆ ಸೆರೆ ಹಿಡಿದಿದ್ದಾರೆ. ಪ್ರಕರಣ ಸಂಬಂಧ ಇಬ್ಬರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಅಡಿಯಲ್ಲಿ ಬೆಂ.ನಗರ ಎಸಿಬಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News