×
Ad

​ಬೈಕಂಪಾಡಿ ಅಡ್ಕಾ: ರಾಜ್ಯಮಟ್ಟದ ದಫ್ ಸ್ಪರ್ಧೆಗೆ ಚಾಲನೆ

Update: 2017-04-17 22:41 IST

ಮಂಗಳೂರು, ಎ.17: ಬೈಕಂಪಾಡಿಯ ಮುಹಿಯುದ್ದೀನ್ ಜುಮಾ ಮಸೀದಿ ಮುಸ್ಲಿಮ್ ಜಮಾಅತ್ ಅಧೀನದ ಹಝ್ರತ್ ಶೇಖ್ ಮುಹಮ್ಮದ್ ವಲಿಯುಲ್ಲಾಹಿ ದರ್ಗಾ ಶರೀಫ್ ಹೆಸರಿನಲ್ಲಿ 2 ವರ್ಷಗಳಿಗೊಮ್ಮೆ ನಡೆಯುವ ಬೈಕಂಪಾಡಿ ಅಡ್ಕಾ ಉರೂಸ್ ಕಾರ್ಯಕ್ರಮದ ಮೂರನೆ ದಿನವಾದ ಸೋಮವಾರ ರಾಜ್ಯಮಟ್ಟದ ದಫ್ ಸ್ಪರ್ಧೆಗೆ ಚಾಲನೆ ನೀಡಲಾಯಿತು.

ಬೆಳ್ತಂಗಡಿಯ ದಾರುಸ್ಸಲಾಂ ಇಸ್ಲಾಮಿಕ್ ಸೆಂಟರ್‌ನ ಅಧ್ಯಕ್ಷ ಅಸ್ಸೈಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ದುಆಶೀರ್ವಚನ ನೀಡಿದರು. ಮಸೀದಿಯ ಖತೀಬ್ ಹೈದರಾಲಿ ಸಖಾಫಿ ದಫ್ ಸ್ಪರ್ಧೆಗೆ ಚಾಲನೆ ನೀಡಿದರು. ಬೈಕಂಪಾಡಿ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಬಿ.ಎ. ಅಬ್ದುನ್ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಬದ್ರಿಯಾ ಮದ್ರಸದ ಅಧ್ಯಕ್ಷ ನ್ಯಾಯವಾದಿ ಮುಕ್ತಾರ್ ಅಹ್ಮದ್, ಸದ್‌ರ್ ಮುಅಲ್ಲಿಂ ಯಹ್ಯಾ ಸಖಾಫಿ, ಜೋಕಟ್ಟೆ ಜುಮಾ ಮಸೀದಿಯ ಅಧ್ಯಕ್ಷ ಉಂಞಿಹಾಜಿ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಮಸೀದಿಯ ಪ್ರಧಾನ ಕಾರ್ಯದರ್ಶಿ ಸೈದುದ್ದೀನ್, ಉಪಾಧ್ಯಕ್ಷ ಚೈಬಾವು ಹಾಜಿ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ನ ಪ್ರಧಾನ ಕಾರ್ಯದರ್ಶಿ ಹಮೀದ್ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.

ಮಸೀದಿಯ ಜೊತೆ ಕಾರ್ಯದರ್ಶಿ ಶಮೀರ್ ಹಸನ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News