ಪಿಕಪ್ ಢಿಕ್ಕಿ: ಇಬ್ಬರಿಗೆ ಗಾಯ
Update: 2017-04-17 23:39 IST
ಮಂಗಳೂರು, ಎ.17: ನಗರದ ಸೆಂಟ್ರಲ್ ಮಾರ್ಕೆಟ್ ಸಮೀಪದ ರೂಪವಾಣಿ ಟಾಕೀಸ್ ಬಳಿ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಅಬ್ದುಲ್ ಖಾದರ್ ಮತ್ತು ಇರ್ಫಾನ್ ಗಾಯಗೊಂಡವರು. ನಗರದ ರೂಪವಾಣಿ ಟಾಕೀಸ್‌ನ ಬಳಿ ರಸ್ತೆಬದಿ ಕೆಲಸ ಮಾಡುತ್ತಿದ್ದ ಅಬ್ದುಲ್ ಖಾದರ್ ಮತ್ತು ಇರ್ಫಾನ್ ಎಂಬವರಿಗೆ ಪಿಕ್‌ಆಪ್ ವಾಹನವೊಂದು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಸೆಂಟ್ರಲ್ ಮಾರ್ಕೆಟ್ ಪರಿಸರದ ಸಾರ್ವಜನಿಕರು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.