ಕೊಡಂಗಲ್ಲು: ಸರಕಾರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ
ಮೂಡುಬಿದಿರೆ, ಎ.18: ಕೊಡಂಗಲ್ಲು ಸರಕಾರಿ ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಶನಿವಾರ ಜರುಗಿತು.
11 ವರ್ಷಗಳಿಂದ ಶಾಲಾ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯಿನಿ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ, ಮೂಡುಬಿದಿರೆ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸುಮತಿ ಹೆಗ್ಡೆ ನಿವೃತ್ತಿಗೊಳ್ಳಲಿದ್ದು, ಅವರನ್ನು ವಾರ್ಷಿಕೋತ್ಸವದ ಸಂದರ್ದಲ್ಲಿ ಶಾಸಕ ಕೆ.ಅಭಯಚಂದ್ರ ಜೈನ್ ಸನ್ಮಾನಿಸಿದರು.
ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನವಿತ್ತರು.
ಮೂಡುಬಿದಿರೆ ಪುರಸಭಾ ಸದಸ್ಯ ಎಂ.ಬಾಹುಬಲಿ ಪ್ರಸಾದ್ ಶುಭ ಹಾರೈಸಿದರು.
ಮೂಡಾ ಅಧ್ಯಕ್ಷ ಸುರೇಶ್ ಪ್ರಭು, ಪುರಸಭಾ ಸದಸ್ಯರಾದ ಸುಪ್ರಿಯಾ ಡಿ. ಶೆಟ್ಟಿ, ಸುರೇಶ್ ಕೋಟ್ಯಾನ್, ಉದ್ಯಮಿ ಶ್ರೀಪತಿ ಭಟ್ ಮುಖ್ಯ ಅತಿಥಿಯಾಗಿದ್ದರು. ಎಸ್.ಡಿ.ಎಂ.ಸಿ. ಮಾಜಿ ಉಪಾಧ್ಯಕ್ಷೆ, ಪೂರ್ಣಿಮಾ ಎಸ್. ಭಟ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸುಮತಿ ಹೆಗ್ಡೆ ಸ್ವಾಗತಿಸಿದರು. ಸಹಶಿಕ್ಷಕಿ ಉಷಾಲತಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಲತಾ ವರದಿ ವಾಚಿಸಿದರು. ಸಹಶಿಕ್ಷಕಿ ಗ್ಲೆಂಡಾ ಡೇಸಾ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳ ಮಾಹಿತಿ ನೀಡಿದರು. ಸಹಶಿಕ್ಷಕಿ ವಾಣಿ ಸನ್ಮಾನ ಪತ್ರ ವಾಚಿಸಿದರು.
ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್ ಕುಮಾರ್ ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷ ಸತೀಶ್ ಕೋಟ್ಯಾನ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮಗಳು ಹಾಗೂ ನಿಸರ್ಗ ಕಲಾವಿದೆರ್ ಬೆದ್ರ ಇವರಿಂದ ‘ಎಂಕ್ಲೆನೆಟ್ಟ್ ಅಂಚ ದಾಲ ಇಜ್ಜಿ’ ಎಂಬ ತುಳು ನಾಟಕ ಪ್ರದರ್ಶನ ನಡೆಯಿತು.