ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಿಎಂ ಸಿದ್ದರಾಮಯ್ಯ
Update: 2017-04-18 18:47 IST
ಬೆಂಗಳೂರು, ಎ.18: ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆತ್ಮಹತ್ಯೆಗೆ ಶರಣಾಗಿರುವ ರೈತರ ಮಕ್ಕಳಿಗೆ ಉಚಿತ ಶಿಕ್ಷಣ, ವಿಧವೆಯಾಗಿರುವ ರೈತನ ಪತ್ನಿಗೆ ತಿಂಗಳಿಗೆ ಎರಡು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ ಸರಕಾರಕ್ಕೆ ಹಣದ ಸಮಸ್ಯೆ ಇಲ್ಲ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 1ಕೋಟಿ ಹಾಗೂ 90 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದರು.