ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ
Update: 2017-04-18 21:04 IST
ಉಳ್ಳಾಲ,ಎ.18: ಯು.ಟಿ.ಫರೀದ್ ಫೌಂಡೇಶನ್ ಮೇಲಂಗಡಿ ಯುನಿಟ್ ಹಾಗೂ ಪ್ರಸಾದ್ ನೇತ್ರಾಲಯ ಮಂಗಳೂರು ಸಹಯೋಗದೊಂದಿಗೆ 65 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಮಂಗಳವಾರ ಆಹಾರ ಸಚಿವ ಯು.ಟಿ.ಖಾದರ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಆಹಾರ ಸಚಿವ ಯು.ಟಿ.ಖಾದರ್ ಅವರು ಮಾತನಾಡಿ, ಯು.ಟಿ.ಫರೀದ್ ಫೌಂಡೇಶನ್ ಮೇಲಂಗಡಿ ಯುನಿಟ್ ಸಂಘಟನೆಯು 65 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ದೇವರು ಮೆಚ್ಚುವಂತಹ ಕಾರ್ಯವಾಗಿದೆ.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಮುಹಮ್ಮದ್ ಮುಸ್ತಫಾ,ಉಳ್ಳಾಲ ನಗರ ಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಉಸ್ಮಾನ್ ಕಲ್ಲಾಪು,ಸದಸ್ಯ ಮುಸ್ತಫಾ ಅಬ್ದುಲ್ಲಾ, ಯು.ಟಿ.ಫರೀದ್ ಫೌಂಡೇಶನ್ ಮೇಲಂಗಡಿ ಯುನಿಟ್ ಅಧ್ಯಕ್ಷ ಕಬೀರ್ ಮೋನು, ಉಪಾಧ್ಯಕ್ಷ ಇರ್ಷಾದ್ ಉಳ್ಳಾಲ್ ಉಪಸ್ಥಿತರಿದ್ದರು.