ಆವರಣವಿಲ್ಲದ ಬಾವಿಗೆ ಬಿದ್ದು ಯುವಕ ಮೃತ್ಯು
Update: 2017-04-19 00:10 IST
ಕಾಸರಗೋಡು, ಎ.19: ಮನೆ ಹಿತ್ತಿಲಿನ ಬಾವಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ಹೊರವಲಯದ ಹಳೆ ಸೂರ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಅಬ್ದುರ್ರಹ್ಮಾನ್ (32) ಎಂದು ಗುರುತಿಸಲಾಗಿದೆ.
ಅಬ್ದುರ್ರಹ್ಮಾನ್ ಅವರು ನಡೆದುಕೊಂಡು ಹೋಗುತ್ತಿದ್ದಾಗ ಆವರಣವಿಲ್ಲದ ಬಾವಿಗೆ ಬಿದ್ದು ಈ ಘಟನೆ ನಡೆದಿದೆ. ಮೃತದೇಹವನ್ನು ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೇಲಕ್ಕೆತ್ತಿದ್ದು, ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ