×
Ad

ಆಹ್ವಾನ ನೀಡದೆ ನಿರ್ಲಕ್ಷ: ಪಾಲೆಮಾರ್ ಆರೋಪ

Update: 2017-04-19 00:17 IST

ಮಂಗಳೂರು, ಎ.18: ಮಳವೂರು ಕಿಂಡಿ ಅಣೆಕಟ್ಟು ತಾನು ಸಚಿವನಾಗಿದ್ದ ಸಂದರ್ಭ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಅನುದಾನ ಬಿಡುಗಡೆ ಮಾಡಿ ಆಗಿರುವ ಯೋಜನೆ. ಹಾಗಿದ್ದರೂ ಇದೀಗ ಯೋಜನೆಯ ಉದ್ಘಾಟನೆಗೆ ತನ್ನನ್ನು ಆಹ್ವಾನಿಸದೆ ನಿರ್ಲಕ್ಷ ವಹಿಸಲಾಗಿದೆ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಆರೋಪಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ ಅವರು, ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಮುದ್ರಿಸಬೇಕಿತ್ತೆಂದು ನಾನು ಹೇಳುವುದಿಲ್ಲ. ಆದರೆ ಆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಶಾಸಕ ಹಾಗೂ ಮಾಜಿ ಸಚಿವನ ನೆಲೆಯಲ್ಲಿ ನನಗೆ ಆಹ್ವಾನ ನೀಡದೆ ನಿರ್ಲಕ್ಷಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಡಾ.ಭರತ್ ಶೆಟ್ಟಿ, ಸಂಜಯ್ ಪ್ರಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News