ಮಂಗಳೂರು: ಬೀದಿಬದಿ ವ್ಯಾಪಾರಸ್ಥರ ತೆರವು
Update: 2017-04-19 12:14 IST
ಮಂಗಳೂರು, ಎ.19: ನಗರದ ಸ್ಟೇಟ್ ಬ್ಯಾಂಕ್, ರಾವ್ ಆ್ಯಂಡ್ ರಾವ್ ಸರ್ಕಲ್ ಹಾಗೂ ಮಿಷನ್ ಸ್ಟ್ರೀಟ್ ನ ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ ಮಹಾನಗರ ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ನಡೆಯಿತು.
ಕಾರ್ಯಾಚರಣೆಯ ಬಗ್ಗೆ ಮೊದಲೇ ಮಾಹಿತಿ ಸಿಕ್ಕಿದ್ದರಿಂದ ಹೆಚ್ಚಿನ ವ್ಯಾಪಾರಿಗಳು ತಮ್ಮ ಸಾಮಗ್ರಿಗಳನ್ನು ಸ್ಥಳಾಂತರಿಸಿದ್ದರಿಂದ ಕಾರ್ಯಾಚರಣೆಗೆ ಯಾವುದೇ ಅಡ್ಡಿಯುಂಟಾಗಲಿಲ್ಲ.