ಅಪ್ರಾಪ್ತ ಬಾಲಕಿಯ ಅಪಹರಣ: ಆರೋಪಿಯ ಬಂಧನ

Update: 2017-04-19 15:26 GMT

ಗುಂಡ್ಲುಪೇಟೆ, ಎ.19: ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ಅಪಹರಿಸಿದ್ದ ಪ್ರಕರಣ ಬೇಧಿಸಿದ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ತಾಲೂಕಿನ ದೊಡ್ಡತುಪ್ಪೂರು ಗ್ರಾಮದ ಲೋಕೇಶ್ ಎಂಬಾತ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅಪಹರಿಸಿ ನಂಜನಗೂಡು ತಾಲೂಕಿನ ಗ್ರಾಮದ ಸಂಬಂಧಿಕರ ಮನೆಯಲ್ಲಿ ಬಚ್ಚಿಟ್ಟಿದ್ದ. ಈ ಬಾಲಕಿ ಪಟ್ಟಣದ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ತೆರಳಿದ್ದ ಮಗಳು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದರೂ ಯಾವುದೇ ಪ್ರಯೋಜನೆಯಾಗದೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಬಗ್ಗೆ ಬಾಲಕಿಯ ಪತ್ತೆಕಾರ್ಯ ಆರಂಭಿಸಿದ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಾಗ ನಂಜನಗೂಡು ತಾಲೂಕಿನ ಗ್ರಾಮವೊಂದರಲ್ಲಿ ಅಪಹರಣ ಮಾಡಿದ್ದ ಯುವಕನನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸಿ ಪೋಷಕರ ವಶಕ್ಕೆ ನೀಡಿದ್ದಾರೆ. ಯುವಕನ ವಿರುದ್ಧ ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News