ಎ.27ರಂದು ಬಿಜೆಪಿ ಸೋಲಿನ ಪರಾಮರ್ಶೆ ಸಭೆ: ಕೆ.ಎಸ್.ಈಶ್ವರಪ್ಪ
ಬೆಂಗಳೂರು, ಎ.20: ನಂಜುನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಪರಾಮರ್ಶೆ ನಡೆಸಲು ಎ.27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಗುರುವಾರ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣಗಳೇನು. ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಮುಂದಿನ ಕಾರ್ಯಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಗಳು ನಡೆಯಲಿದೆ ಎಂದು ತಿಳಿಸಿದರು.
ಹಿರಿಯ ಕಾರ್ಯಕರ್ತರ ಕಡೆಗಣನೆ: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಸುಮಾರು 25-30ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿರುವ ಹಿರಿಯ ಕಾರ್ಯಕರ್ತರನ್ನು ಮೂಲೆಗುಂಪು ಮಾಡಲಾಗಿತ್ತು ಎಂಬ ಆರೋಪಗಳಿವೆ. ಇದರ ಸತ್ಯಾಸತ್ಯತೆಗಳು ಎ.27ರಂದು ನಡೆಯುವ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಅವರು ಹೇಳಿದರು.
ಬಿಜೆಪಿಯಲ್ಲಿರುವ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ಪರಾಮರ್ಶೆ ನಡೆಸಲು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ನೇತೃತ್ವದಲ್ಲಿ ನಾಲ್ಕು ಮಂದಿಯ ಕಮಿಟಿಯೊಂದನ್ನು ರಚಿಸಲಾಗಿತ್ತು. ಆದರೆ, ಇಲ್ಲಿಯವರೆಗೂ ಆ ಕಮಿಟಿಯಿಂದ ಒಂದು ಸಭೆಯು ನಡೆದಿಲ್ಲ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರವರಿಗೆ ದೂರು ಸಲ್ಲಿಸಲಾಗುವುದು.
-ಕೆ.ಎಸ್.ಈಶ್ವರಪ್ಪ ವಿರೋಧ ಪಕ್ಷದ ನಾಯಕ, ವಿಧಾನ ಪರಿಷತ್