ದರೋಡೆ ಪ್ರಕರಣ: ಇಬ್ಬರು ರೌಡಿಗಳ ಬಂಧನ
Update: 2017-04-20 22:24 IST
ಬೆಂಗಳೂರು, ಎ.20: ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಪ್ರಕರಣ ಸಂಬಂಧ ಇಬ್ಬರು ರೌಡಿಗಳನ್ನು ಜಗಜೀವನರಾಮನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಜಗಜೀವನರಾಮನಗರದ ವಿಜಿ ಹಾಗೂ ಕುಮಾರ ಬಂಧಿತ ರೌಡಿಗಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೈಸೂರು ರಸ್ತೆಯಿಂದ ಪಾರೂಕಿಯಾ ನಗರಕ್ಕೆ ಬರುವ ರಸ್ತೆಯಲ್ಲಿ ಮಾರಾಕಾಸ್ತ್ರಗಳನ್ನು ಹಿಡಿದುಕೊಂಡು ಒಂಟಿಯಾಗಿ ಓಡಾಡುವವರನ್ನು ಬೆದರಿಸಿ ಸುಲಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಬಂಧಿತರಿಂದ 3 ಲಕ್ಷ ಮೌಲ್ಯದ 90 ಗ್ರಾಂ ಚಿನ್ನಾಭರಣ ಸೇರಿ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಆರೋಪಿಗಳ ಬಂಧನದಿಂದ ಒಂದು ಸರ ಅಪಹರಣ 1 ರಾತ್ರಿ ಕನ್ನ ಕಳವು 3 ಮನೆ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 5 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.