ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಜೈಲುಶಿಕ್ಷೆ

Update: 2017-04-20 18:30 GMT

ದಾವಣಗೆರೆ, ಎ.20: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಸಂಬಂಧಿಕರ ಮನೆಯಲ್ಲಿ ಬಾಲಕಿಯ ಮೇಲೆ ಷಣ್ಮುಖ ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಪ್ರಕರಣಕ್ಕೆ ತೀರ್ಪು ನೀಡಿದ ನ್ಯಾಯಾಲಯ ಅಪಹರಣ ಅಪರಾಧಕ್ಕೆ 5 ವರ್ಷ ಸಜೆ, 15 ಸಾವಿರ ರೂ. ದಂಡ ಹಾಗೂ ಪೊಕ್ಸೋ ಕಾಯ್ದೆಯಡಿ ಅಡಿ 10 ವರ್ಷ ಕಠಿಣ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದು, 30 ಸಾವಿರ ರೂ.ಗಳನ್ನು ಬಾಲಕಿಗೆ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡರು ಆದೇಶಿಸಿದ್ದಾರೆ. ಸರ್ಕಾರದ ಪರ ವಿಶೇಷ ಸಾರ್ವಜನಿಕರ ಅಭಿಯೋಜಕ ಎಚ್.ಜಿ. ಬಣಕಾರ್ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News