×
Ad

ತುರವೇ ಉಡುಪಿ ಜಿಲ್ಲಾ ಕಚೇರಿ ಉದ್ಘಾಟನೆ

Update: 2017-04-21 18:14 IST

ಉಡುಪಿ, ಎ.21: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ನೂತನ ಕಚೇರಿಯನ್ನು ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಶುಕ್ರವಾರ ಉಡುಪಿ ಕೃಷ್ಣೃಪಾ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ತುಳು ಭಾಷೆಗೆ ಮಾನ್ಯತೆ ಸಿಗಬೇಕು. ತುಳು ಕಲಾವಿದರಿಗೆ ಗೌರವ ಸಿಗಬೇಕು. ತುಳು ಸಿನೆಮಾಕ್ಕೆ ಪ್ರತ್ಯೇಕ ಛೇಂಬರ್ ಸ್ಥಾಪಿಸ ಬೇಕು ಎಂದು ಅವರು ಆಗ್ರಹಿಸಿದರು. ಧ್ವನಿ ಇಲ್ಲದವರಿಗೆ ಧ್ವನಿಯಾಗಿರುವ ಈ ವೇದಿಕೆಯಲ್ಲಿ ಸುಮಾರು 5000 ಮಂದಿ ಸದಸ್ಯರಿದ್ದಾರೆ. ಅಲ್ಲದೆ ಮುಂಬೈ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಘಟಕವನ್ನು ಸ್ಥಾಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ತುಳು ಚಿತ್ರನಟ ಅಸ್ತಿಕ್ ಅವಿನಾಶ್ ಶೆಟ್ಟಿ, ಚಿತ್ರನಟಿ ರಂಜಿತಾ, ಕೇಂದ್ರೀಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್, ಜಿಲ್ಲಾಧ್ಯಕ್ಷ ರಮೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಅಝರುದ್ದೀನ್ ಸುಬ್ರಹ್ಮಣ್ಯ ನಗರ, ಮಿಥುನ್ ಶೆಟ್ಟಿ, ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸಿರಾಜ್ ಅಡ್ಕರೆ, ಕೇಂದ್ರೀಯ ಕೋಶಾಧಿಕಾರಿ ಅಬ್ದುಲ್ ರಶೀದ್, ಯುವ ಘಟಕದ ಜಿಲ್ಲಾಧ್ಯಕ್ಷ ಹರೀಶ್ ಶೆಟ್ಟಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಜ್ಯೋತಿಕಾ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News