ಮಂಗಳೂರು ಅಂತರ್ ವಿಭಾಗೀಯ ಸಾಂಸ್ಕೃತಿಕ ಸ್ಪರ್ಧೆ ಸಮಾಪನ

Update: 2017-04-21 13:35 GMT

ಮಂಗಳೂರು, ಎ.21: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆದ ಮೂರು ದಿನಗಳ ಅಂತರ್ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಸಮಾಪನಗೊಂಡಿತು. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಸ್ಯಶಾಸ್ತ್ರ ವಿಭಾಗ ಸಮಗ್ರ ಪ್ರಶಸ್ತಿ ಪಡೆದರೆ, ಇಂಡಸ್ಟ್ರಿಯಲ್ ಕೆಮೆಸ್ಟ್ರಿ ಮತ್ತು ಬಯೋಕೆಮಿಕಲ್ ದ್ವಿತೀಯ ಹಾಗೂ ಫಿಸಿಕ್ಸ್ ವಿಭಾಗ ತೃತೀಯ ಸ್ಥಾನ ಪಡೆಯಿತು. ಈ ಸಂದರ್ಭ ಯಕ್ಷರಂಗದ ಸೀತಾರಾಮ್ ಕುಮಾರ್ ಕಟೀಲ್‌ರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿ ಅವರು ಇಂದು ವಿದ್ಯಾರ್ಥಿಗಳಿಗೆ ಕಲಿಯಲು ಸಾಕಷ್ಟು ಅವಕಾಶಗಳಿವೆ, ಹೆತ್ತವರ ಪ್ರೋತ್ಸಾಹ ಸರಕಾರದ ಅನುದಾನವೂ ಸಿಗುತ್ತದೆ. ಆದರೆ ಅದನ್ನು ಸದುಪಯೋಗಪಡಿಸುವ ಇಚ್ಛಾಶಕ್ತಿಯ ಕೊರತೆಯಿದೆ ಎಂದರು.

ವಿವಿ ಕುಲಸಚಿವ ಪ್ರೊ. ಕೆ.ಎಂ.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ದಿವಾಕರ್ ಶೆಟ್ಟಿ, ಉಪಾಧ್ಯಕ್ಷ ಶ್ಯಾಮಪ್ರಸಾದ್, ವೀರೇಂದ್ರ ಮೊಗವೀರ, ಸುಕ್ಷಿತಾ ರಾವ್ ಬಿ., ಅಶೋಕ್ ಆರ್. ಉಪಸ್ಥಿತರಿದ್ದರು.

 ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕ ಪ್ರೊ. ಬಾರ್ಕೂರು ಉದಯ ಸ್ವಾಗತಿಸಿದರು. ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ಸುನೀಲ್ ಕೆ.ಎಂ. ವರದಿ ವಾಚಿಸಿದರು. ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News