ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ನಿಧನ

Update: 2017-04-21 16:42 GMT

ಉಡುಪಿ, ಎ.21: ಹಿರಿಯಡ್ಕ ಪೊಲೀಸ್ ಠಾಣಾ ಹೆಡ್ ಕಾನ್‌ಸ್ಟೇಬಲ್ ಎನ್.ಎನ್.ಭಂಡರ್ಕಾರ್(53) ಎ.20ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.

ಕಾರ್ಕಳದ ಸಾಣೂರು ಮುರ್ತಂಗಡಿ ನಿವಾಸಿಯಾಗಿರುವ ಇವರು ನಿನ್ನೆ ಸಂಜೆ 7ಗಂಟೆ ಸುಮಾರಿಗೆ ಕರ್ತವ್ಯ ಮುಗಿಸಿ ಬಸ್‌ನಲ್ಲಿ ಮನೆಗೆ ತೆರಳುತ್ತಿದ್ದು, ಈ ವೇಳೆ ದಾರಿ ಮಧ್ಯೆ ಇವರಿಗೆ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಐಖ ಕರೆದೊಯ್ಯಲಾಯಿತು. ಅಲ್ಲಿ ನಸುಕಿನ ವೇಳೆ 2ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಕಳೆದ 23ವರ್ಷಗಳಿಂದ ಕುಂದಾಪುರ, ಹೆಬ್ರಿ, ಅಜೆಕಾರು ಹಾಗೂ ಹಿರಿಯಡ್ಕ ದಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು, ಪ್ರಸ್ತುತ ಮೂರು ವರ್ಷಗಳಿಂದ ಹಿರಿಯಡ್ಕ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಅವರ ಊರಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News