ರಾಜ್ಯ ಸರಕಾರದ 165 ಭರವಸೆಗಳಲ್ಲಿ 135 ಭರವಸೆಗಳ ಈಡೇರಿಕೆ: ಡಾ.ಜಿ.ಪರಮೇಶ್ವರ್

Update: 2017-04-21 17:11 GMT

ಚಿಕ್ಕಮಗಳೂರು, ಎ,21:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಜನತೆಗೆ 165 ಭರವಸೆಗಳನ್ನು ನೀಡಿದ್ದೆವು. ಅದರಂತೆ ಮುಖ್ಯವುಂತ್ರಿ ಸಿದ್ದರಾಮಯ್ಯನವರು ಸಾವಿರಾರು ಕೋಟಿ ರೂ.ಗಳ ಅನುದಾನವನ್ನು ಮತ್ತು ಯೋಜನೆಗಳನ್ನು ರೂಪಿಸುವ ಮೂಲಕ 135 ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ನುಡಿದರು.

  ಅವರು ತರೀಕೆರೆ ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 82 ಸಾವಿರ ಕೋಟಿ ರೂ ಅನುದಾನ ನೀಡಲಾಗಿದೆ.  ರಾಜ್ಯದಲ್ಲಿ ಸುಮಾರು 10 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಸಮಗ್ರ ನೀರಾವರಿ ಯೋಜನೆಗೆ 65 ಸಾವಿರ ಕೋಟಿ, 1 ಲೀ ಹಾಲಿಗೆ 5 ರೂ ಸಬ್ಸಿಡಿ ನೀಡಲಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಸಾಮಾಜಿಕ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇವೆ ಎಂದರು.

  ಶಾಸಕ ಜಿ.ಹೆಚ್.ಶ್ರೀನಿವಾಸ್ ಮಾತನಾಡಿ ತಾಲ್ಲೂಕಿನ 21 ಸಾವಿರ ಹೆಕ್ಟೇರ್ ಭೂಮಿಗೆ ನೀರೊದಗಿಸಲು 82 ಕೆರೆಗಳಿಗೆ ನೀರು ತುಂಬಿಸಲು ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಲಾಗಿದೆ. ತಾಲ್ಲೂಕಿನ ಶೇ.75ರಷ್ಟು ರಸ್ತೆಗಳು ಈಗಾಗಲೇ ಅಭಿವೃದ್ಧಿಯಾಗಿದ್ದು, ಉಳಿದ 25 ರಷ್ಟು ರಸ್ತೆಗಳನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಲಾಗುವುದು, ಕುಂಟಿನಮಡು ಗ್ರಾಮಕ್ಕೆ ಪಿಯು ಕಾಲೇಜು ಮಂಜೂರು ಮಾಡಿಸುವುದಾಗಿ ತಿಳಿಸಿದರು.

  ಉಗ್ರಾಣಿ, ಅಮೃತಾಪುರ ಏತ ನೀರಾವರಿ ಯೋಜನೆಯಿಂದ ಸುಮಾರು 17 ಕೋಟಿ ರೂ ವೆಚ್ಚದಲ್ಲಿ 16 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದ ಅವರು ತಾಲ್ಲೂಕಿನಲ್ಲಿ ನಾನು ಎಂದೂ ಓಟ್ ಬ್ಯಾಂಕ್ ರಾಜಕಾರಣ ಮಾಡಿಲ್ಲ, ಮುಂದೆಯೂ ಸಹ ಮಾಡುವುದಿಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು.

   ಕಾರ್ಯಕ್ರಮದಲ್ಲಿ ರಾಜ್ಯ ವಸತಿ ಮತ್ತು ಜಂಗಲ್ ಲಾಡ್ಜ್ ಅಧ್ಯಕ್ಷ ಎ.ಎನ್.ಮಹೇಶ್, ಮಾಜಿ ಎಂಎಲ್‌ಸಿ ಗಾಯತ್ರಿಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್.ವಿಜಯ್‌ಕುಮಾರ್, ಜಿಲ್ಲಾ ಮುಖಂಡ ಶಿವಾನಂದಸ್ವಾಮಿ, ಜಿಪಂ ಸದಸ್ಯರಾದ ರೇಣುಕಮ್ಮನಟರಾಜ್, ರಾಧಾಶಿವಕುಮಾರ್, ದಲಿತ ಮುಖಂಡ ಜಿ.ಜಿ.ತಿಪ್ಪೇಶ್, ಪುರಸಭಾ ಅಧ್ಯಕ್ಷೆ ಪರ್ವಿನ್ ತಾಜ್, ಜಿಲ್ಲಾಧಿಕಾರಿ ಜಿ.ಸತ್ಯವತಿ, ಜಿಪಂ ಸಿಇಓ ಡಾ. ಆರ್.ರಾಘಪ್ರಿಯ, ಜಿಲ್ಲಾ ವರಿಷ್ಠಾಧಿಕಾರಿ ಅಣ್ಣಾಮಲೈ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News