×
Ad

ಪತ್ರಕರ್ತರಿಗಾಗಿ ಕಾರ್ಯಾಗಾರ

Update: 2017-04-22 12:59 IST

ಬೆಂಗಳೂರು, ಎ.22: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಕರ್ನಾಟಕ ಮಾಧ್ಯಮ ಅಕಾಡಮಿಯ ಸಹಯೋಗದೊಂದಿಗೆ ಪತ್ರಕರ್ತರಿಗಾಗಿ "ಹವಾಮಾನ ಮಾಹಿತಿ ಸಂವಹನ-ಮಾಧ್ಯಮದ ಪಾತ್ರ" ಕಾರ್ಯಾಗಾರವನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುಖ್ಯ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಟಿ.ಎಂ. ವಿಜಯ ಭಾಸ್ಕರ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ಹಾಗೂ ಕರ್ನಾಟಕ ಮಾಧ್ಯಮ ಅಕಾಡಮಿಯ ಅಧ್ಯಕ್ಷ ಎಂ.ಸಿದ್ದರಾಜು ಮತ್ತು ಕಾರ್ಯದರ್ಶಿ ಎಸ್.ಶಂಕರಪ್ಪ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News