×
Ad

ತಂದೆಯ ಹೆಜ್ಜೆ ಅನುಸರಿಸುತ್ತಿರುವ ಜೂನಿಯರ್ ಡಿವಿಲಿಯರ್ಸ್

Update: 2017-04-22 18:03 IST

ಹೊಸದಿಲ್ಲಿ, ಎ.22: ಎಬಿ ಡಿವಿಲಿಯರ್ಸ್ ಹೊಸ ತರಹದ ಹೊಡೆತಗಳು ಹಾಗೂ ಬ್ಯಾಟಿಂಗ್ ತಂತ್ರದಿಂದ ದಕ್ಷಿಣ ಆಫ್ರಿಕ ಕ್ರಿಕೆಟ್ ಮಾತ್ರವಲ್ಲ ವಿಶ್ವ ಕ್ರಿಕೆಟ್‌ನಲ್ಲಿ ಓರ್ವ ಶ್ರೇಷ್ಠ ಆಟಗಾರನಾಗಿದ್ದಾರೆ. ಎಬಿಡಿ ಪುತ್ರ ಅಬ್ರಹಾಂ ಅತ್ಯಂತ ಕಿರಿಯ ವಯಸ್ಸಿಯಲ್ಲಿ ಕೈಯಲ್ಲಿ ಬ್ಯಾಟ್ ಹಿಡಿದು ತಂದೆಯ ಹೆಜ್ಜೆಯನ್ನೇ ಹಿಂಬಾಲಿಸುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಪುಟಾಣಿ ಅಬ್ರಹಾಂ ತನ್ನ ತಂದೆಯಂತೆಯೇ ಬ್ಯಾಟ್‌ನಲ್ಲಿ ಚೆಂಡನ್ನು ಬಾರಿಸುವ ಮೂಲಕ ಗಮನ ಸೆಳೆಯುತ್ತಿದೆ.

ಡಿವಿಲಿಯರ್ಸ್ ಪ್ರಸ್ತುತ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡುತ್ತಿದ್ದಾರೆ. ದಕ್ಷಿಣ ಆಫ್ರಿಕದ ದೇಶೀಯ ಟ್ವೆಂಟಿ-20 ಟೂರ್ನಿಯ ವೇಳೆ ಬೆನ್ನುನೋವಿಗೆ ತುತ್ತಾಗಿದ್ದ ಡಿವಿಲಿಯರ್ಸ್ ಈ ವರ್ಷದ ಐಪಿಎಲ್‌ನಲ್ಲಿ ಕೆಲವು ಪಂದ್ಯಗಳಿಂದ ವಂಚಿತರಾಗಿದ್ದಾರೆ. ಪಂಜಾಬ್ ವಿರುದ್ಧ ಪಂದ್ಯದಲ್ಲಿ ಕೇವಲ 46 ಎಸೆತಗಳಲ್ಲಿ 89 ರನ್ ಗಳಿಸಿದ್ದ ಡಿವಿಲಿಯರ್ಸ್ 3 ಪಂದ್ಯಗಳಲ್ಲಿ ಒಟ್ಟು 137 ರನ್ ಗಳಿಸಿದ್ದಾರೆ. ಆರ್‌ಸಿಬಿ 6 ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋತಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News