×
Ad

ರೈಸಿಂಗ್ ಪುಣೆ ಸೂಪರ್‌ಜೈಂಟ್ ಗೆ ಜಯ

Update: 2017-04-22 19:51 IST

ಪುಣೆ, ಎ.22: ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಸ್ಫೋಟಕ ಬ್ಯಾಟಿಂಗ್ ನೆರವಿನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡ ಐಪಿಎಲ್‌ನ 24ನೆ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 177 ರನ್‌ಗಳ ಸವಾಲನ್ನು ಪಡೆದ ಪುಣೆ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 179 ರನ್ ಗಳಿಸಿ ಕೂಟದಲ್ಲಿ ಮೂರನೆ ಗೆಲುವು ದಾಖಲಿಸಿತು.
 ಮಹೇಂದ್ರ ಸಿಂಗ್ ಧೋನಿ ಔಟಾಗದೆ 61 ರನ್(34ಎ, 5ಬೌ,3ಸಿ) ಮತ್ತು ಆರ್‌ಎ ತ್ರಿಪಾಠಿ 59 ರನ್(41ಎ, 6ಬೌ, 3ಸಿ) , ಸ್ಟೀವ್ ಸ್ಮಿತ್ 27 ರನ್, ಮನೋಜ್ ತಿವಾರಿ ಔಟಾಗದೆ 17 ರನ್ ಮತ್ತು ಬೆನ್ ಸ್ಟೋಕ್ಸ್ 10 ರನ್ ಮತ್ತು ಅಜಿಂಕ್ಯ ರಹಾನೆ 2 ರನ್ ಗಳಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಸನ್‌ರೈಸರ್ಸ್‌ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 176 ರನ್ ಗಳಿಸಿತ್ತು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News