ಕಾವ್ಯಾ ಕಡಮೆ ನಾಗರಕಟ್ಟೆಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ

Update: 2017-04-22 14:55 GMT

ಉಡುಪಿ, ಎ.22: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ವಿವಿ ಜಂಟಿಯಾಗಿ ನೀಡುವ ಈ ಬಾರಿಯ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಯುವ ಬರಹಗಾರ್ತಿ, ಕವಯಿತ್ರಿ ಕಾವ್ಯಾ ಕಡಮೆ ನಾಗರಕಟ್ಟೆ ಅವರಿಗೆ ಲಭಿಸಿದೆ. ಪ್ರಶಸ್ತಿಯು 10,000ರೂ. ನಗದು ಹಾಗೂ ಪ್ರಶಸ್ತಿ ಫಲಕ ವನ್ನೊಳಗೊಂಡಿದೆ.

ಸುಬ್ರಾಯ ಚೊಕ್ಕಾಡಿ ಮತ್ತು ಜಯರಾಮ ಕಾರಂತ ಅವರನ್ನೊಳಗೊಂಡ ಆಯ್ಕೆ ಸಮಿತಿ ಕಾವ್ಯಾ ಕಡಮೆ ನಾಗರಕಟ್ಟೆ ಅವರ ‘ಜೀನ್ಸ್ ತೊಟ್ಟ ದೇವರು’ ಕಾವ್ಯ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

 ‘ಧ್ಯಾನಕ್ಕೆ ತಾರೀಖಿನ ಹಂಗಿಲ್ಲ’ ಕಾವ್ಯ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಪಡೆದಿರುವ ಕಾವ್ಯಾ, ವಿದ್ಯಾರ್ಥಿ ದಿಸೆಯಿಂದಲೇ ಹಲವು ಪ್ರಶಸ್ತಿಗಳನ್ನು ಪಡೆಯುತ್ತಾ ಬಂದವರು. ‘ಪುನರಪಿ’ ಅವರ ಪ್ರಕಟಿತ ಕಾದಂಬರಿ. ಕಾವ್ಯಾ ಪ್ರಸ್ತುತ ಅಮೇರಿಕಾದ ನ್ಯೂಜೆರ್ಸಿಯಲ್ಲಿ ವಾಸಿಸುತ್ತಿದ್ದಾರೆ. ಮುಂದಿನ ಆಗಸ್ಟ್ ತಿಂಗಳ ಎರಡನೆ ವಾರದಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಕಾವ್ಯಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News