×
Ad

ಉಡುಪಿ: ತೆರಿಗೆ ಪಾವತಿಗೆ ಸೂಚನೆ

Update: 2017-04-22 23:43 IST

 ಉಡುಪಿ, ಎ.22: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಟ್ಟಡಗಳ ಮತ್ತು ಕೃಷಿಯೇತರ ನಿವೇಶನಗಳ ಮಾಲಕರು, ಅನುಭೋಗದಾರರು 2017-18ನೆ ಸಾಲಿನ ಆಸ್ತಿ ತೆರಿಗೆಯನ್ನು ಎ.30ರೊಳಗೆ ಪಾವತಿಸಿದಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಂತೆ ಶೇ.5 ರಿಯಾಯಿತಿ ಇರುತ್ತದೆ.

ಎಲ್ಲಾ ತೆರಿಗೆದಾರರು ನಿಗದಿತ ಅವಧಿಯೊಳಗೆ ಆಸ್ತಿ ತೆರಿಗೆ ಪಾವತಿಸಿ ರಿಯಾಯಿತಿ ಪಡೆಯುವಂತೆ ಹಾಗೂ 2016-17ನೆ ಸಾಲಿನವರೆಗೆ ತೆರಿಗೆ ಪಾವತಿಸದೆ ಬಾಕಿ ಇರುವವರು ದಂಡನೆ ಸಮೇತ ಕೂಡಲೇ ತೆರಿಗೆ ಪಾವತಿಸುವಂತೆ ಉಡುಪಿ ನಗರಸಭಾ ಪೌರಾಯುಕ್ತರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News