ಡಿ.ಕೆ. ರವಿಯವರ ಅಣ್ಣನ ಪತ್ನಿಯಿಂದ ಆತ್ಮಹತ್ಯೆಗೆ ಯತ್ನ

Update: 2017-04-23 16:58 GMT

ತುಮಕೂರು, ಎ.23: ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ಅಣ್ಣ ರಮೇಶ್ ಅವರ ಪತ್ನಿ ಶಶಿಕಲಾ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಮದ್ಯ ವ್ಯಸನಿಯಾಗಿದ್ದ ರಮೇಶ್ ಗಲಾಟೆ ಮಾಡುತ್ತಿದ್ದುದರಿಂದ ಬೇಸತ್ತ ಶಶಿಕಲಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಅಸ್ವಸ್ಥಗೊಂಡಿರುವ ಶಶಿಕಲಾರನ್ನು ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಅಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News