×
Ad

ಚುನಾವಣಾ ಪೂರ್ವಭಾವಿ ಸಿದ್ಧತೆ: ಪಾಲಿಕೆಯ ಕಾಂಗ್ರೆಸ್ ಸದಸ್ಯರೊಂದಿಗೆ ಸಚಿವ ರೈ ಸಭೆ

Update: 2017-04-23 23:32 IST

ಮಂಗಳೂರು, ಎ. 23: ಮುಂದಿನ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಿದ್ಧತೆಗಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಬಿ. ರಮಾನಾಥ ರೈ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಂಗಳೂರಿಗೆ ಗರಿಷ್ಠ ಅನುದಾನ ನೀಡಿದೆ. ಅಭಿವೃದ್ಧಿಯೇ ನಮ್ಮ ಏಕ ಉದ್ದೇಶ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹಿಂದೆ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ನಾವು ಮಾಡಿದ್ದೇವೆ. ಹಾಗಾಗಿ ಎಲ್ಲಾ ಕಾರ್ಪೊರೇಟರ್‌ಗಳು ಏಕ ಮನಸ್ಸಿನಿಂದ ಒಗ್ಗಟ್ಟಾಗಿ ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಉಭಯ ಶಾಸಕರಾದ ಜೆ.ಆರ್.ಲೋಬೊ ಮತ್ತು ಮೊಯ್ದಿನ್ ಬಾವರ ಸಲಹೆಗಳನ್ನು ಪಡೆದು ಕೆಲಸ ಮಾಡುವಂತೆ ಸೂಚಿಸಿದರು.

ಮಂಗಳೂರು ನಗರ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ರಾತ್ರಿ ಹಗಲೆನ್ನದೇ ಶ್ರಮಿಸಬೇಕು ಎಂದು ಸಲಹೆ ನೀಡಿದರು.
 
ಶಾಸಕರಾದ ಜೆ.ಆರ್.ಲೋಬೊ ಮತ್ತು ಮೊಯ್ದಿನ್ ಬಾವ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಹಾಗೂ ಮಾಜಿ ಮೇಯರ್‌ಗಳು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್, ಮ.ನ.ಪಾ. ಮುಖ್ಯಸಚೇತಕ ಶಶಿಧರ ಹೆಗ್ಡೆ, ಮಾಜಿ ಮೇಯರ್‌ಗಳಾದ ಹರಿನಾಥ್, ಜೆಸಿಂತಾ ಆಲ್ಫ್ರೆಡ್, ಮಹಾಬಲ ಮಾರ್ಲ, ಅಬ್ದುಲ್ ಅಝೀಝ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ರವೂಫ್, ನಾಗವೇಣಿ, ಸಬಿತಾ ಮಿಸ್ಕಿತ್, ಪ್ರತಿಭಾ ಕುಳಾಯಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು, ಬ್ಲಾಕ್ ಅಧ್ಯಕ್ಷರು ವಿಶ್ವಾಸ್ ಕುಮಾರ್ ದಾಸ್, ಬಾಲಕೃಷ್ಣ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ ಮತ್ತು ಸದಾಶಿವ ಉಳ್ಳಾಲ, ಸಂತೋಷ್ ಕುಮಾರ್ ಶೆಟ್ಟಿ, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News