ಮದ್ರಸ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Update: 2017-04-23 18:05 GMT

ಶಿವಮೊಗ್ಗ, ಎ.23: ಮದ್ರಸ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಡೆದಿದೆ.

ಬಿಹಾರ ಮೂಲದ ಸಲ್ಮಾನ್ ರಜಾಕ್ (30) ಬಂಧಿತ ಆರೋಪಿ. ಹೊಳೆಹೊನ್ನೂರಿನ ನೂರಾನಿ ಮದ್ರಸದಲ್ಲಿ ಈ ಘಟನೆ ನಡೆದಿದೆ. ಮದ್ರಸದ ಮೂವರು ವಿದ್ಯಾರ್ಥಿಗಳಿಗೆ ಆರೋಪಿಯು ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಈ ಕುರಿತಂತೆ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ವಿದ್ಯಾರ್ಥಿಗಳ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News