ಸಿಇಟಿ ಅರಿವು ಸಾಲ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

Update: 2017-04-23 18:31 GMT

ಮಂಗಳೂರು, ಎ.23: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 2017-18ನೆ ಸಾಲಿನ ಅರಿವು ಶಿಕ್ಷಣ ಸಾಲ ಯೋಜನೆಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ(ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬುದ್ಧ) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

www.kmdc.kar.nic.in/arivu 2017-18ನೆ ಸಾಲಿನಲ್ಲಿ ಸಿಇಟಿ/ಪಿಜಿಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಹಾಗೂ ಸರಕಾರದಿಂದ ಅಂಗೀ ಕೃತಗೊಂಡ 2 ವರ್ಷ ಅಥವಾ ಮೇಲ್ಪಟ್ಟ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ಪಿಎಚ್‌ಡಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರಿವು ಸಾಲ ಯೋಜನೆಯಡಿ ಶೇ.2ರ ಸೇವಾ ಶುಲ್ಕದೊಂದಿಗೆ 75ಸಾವಿರ ರೂ. ವರೆಗಿನ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಬಗ್ಗೆ ನಿಗಮದ ವೆಬ್‌ಸೈಟ್ ನ್ನು ತೆರೆದು ಸಿಇಟಿ ಅಥವಾ ನಾನ್ ಸಿಇಟಿ ವಿದ್ಯಾರ್ಥಿಗಳು ತಮಗೆ ಅನ್ವಯಿಸುವ ಲಿಂಕ್‌ಗೆ ಕ್ಲಿಕ್ ಮಾಡಿ ಅರ್ಜಿ ಭರ್ತಿ ಮಾಡಬೇಕು. ಬಳಿಕ ಕ್ಯೂ.ಆರ್ ಕೋಡ್ ಮುದ್ರಿತ ಅರ್ಜಿಯ ಪ್ರಿಂಟ್‌ಔಟ್ ತೆಗೆದು ಅದರಲ್ಲಿ ತಿಳಿಸಿದ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, 2ನೆ ಮಹಡಿ, ಮೌಲಾನಾ ಆಝಾದ್ ಅಲ್ಪಸಂಖ್ಯಾತರ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News