ಉಡುಪಿ: ಎ.30ರಿಂದ 2ನೇ ಸುತ್ತಿನ ಪಲ್ಸ್ ಪೋಲಿಯೊ

Update: 2017-04-24 15:19 GMT

ಉಡುಪಿ, ಎ.24: ಜಿಲ್ಲೆಯಲ್ಲಿ ಎ.30ರಂದು ಎರಡನೇ ಸುತ್ತಿನ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಎ.30ರಂದು ಬೆಳಗ್ಗೆ 8 ಗಂಟೆಗೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದು ಡಿಹೆಚ್‌ಒ ಡಾ.ರೋಹಿಣಿ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News