ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಐವರ ಬಂಧನ

Update: 2017-04-24 17:33 GMT

ಶಿವಮೊಗ್ಗ, ಎ.24: ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ಟಿ - 20 ಪಂದ್ಯಾವಳಿಗಳಿಗೆ ಬೆಟ್ಟಿಂಗ್ ಕಟ್ಟುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಮಲವಗೊಪ್ಪ ಗ್ರಾಮದ ಮುಹಮ್ಮದ್ ಮಕ್ಸೂದ್, ಹರಿಗೆ ಬಡಾವಣೆಯ ಕಿರಣ್, ಮಧು, ಎನ್.ಟಿ.ರಸ್ತೆಯ ಶಾಬಾಜ್ ಅಹಮದ್ ಹಾಗೂ ಜ್ಯೋತಿ ನಗರದ ಅರುಣ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ವರಿಂದ ಜೂಜಾಟಕ್ಕೆ ಬಳಸಿದ್ದ 95,150 ರೂ. ಹಾಗೂ ಏಳು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ಪ್ರಕರಣ ದಾಖಲಿಸಿದ್ದಾರೆ.

ನಗರದ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ವ್ಯಾಪಕವಾಗಿ ನಡೆಯುತ್ತಿರುವ ದೂರುಗಳು ಇತ್ತೀಚೆಗೆ ಪೊಲೀಸ್ ಇಲಾಖೆಗೆ ಬಂದಿದ್ದವು. ಇದರ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆಯವರು ಡಿಸಿಬಿ ಹಾಗೂ ಡಿಎಸ್‌ಬಿ ಪೊಲೀಸ್ ತಂಡಗಳ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡಗಳ ರಚನೆ ಮಾಡಿದ್ದರು.  ಈ ತಂಡಗಳು ನಗರದ ಸೂಳೇಬೈಲು, ಗಾಂಧಿಬಜಾರ್, ರಾಮಣ್ಣಶ್ರೇಷ್ಠಿ ಪಾರ್ಕ್, ಮಲವಗೊಪ್ಪ ಮೊದಲಾದೆಡೆ ಬೆಟ್ಟಿಂಗ್ ಅಡ್ಡೆಗಳ ಮೇಲೆ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿವೆ. 

ಮಾಹಿತಿ ನೀಡಿ: ಕ್ರಿಕೆಟ್ ಬೆಟ್ಟಿಂಗ್, ಜೂಜಾಟ ನಡೆಯುತ್ತಿರುವ ಕುರಿತಂತೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಜಿಲ್ಲಾ ರಕ್ಷಣಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ ನಿಯಂತ್ರಣ ಕೊಠಡಿ ಸಂಖ್ಯೆ : 100 ಅಥವಾ 08182-261413 ಗೆ ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News