ಪಣಿಯಾಡಿಪ್ರಶಸ್ತಿಗೆ ತುಳು ಕಾದಂಬರಿ ಆಹ್ವಾನ

Update: 2017-04-24 18:34 GMT

ಉಡುಪಿ, ಎ.24: ತುಳುಕೂಟ ಉಡುಪಿ ಇದರ ಆಶ್ರಯದಲ್ಲಿ ಪ್ರತಿ ವರ್ಷ ಏರ್ಪಡಿಲಾಗುವ ಎಸ್.ಯು.ಪಣಿಯಾಡಿ ಕಾದಂಬರಿ ಪ್ರಶಸ್ತಿಗಾಗಿ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ತುಳು ಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕೆಂಬ ಆಶಯದಲ್ಲಿ ತುಳು ಚಳುವಳಿಯ ಪ್ರವರ್ತಕರಾದ ದಿ.ಎಸ್.ಯು. ಪಣಿಯಾಡಿ ಅವರ ನೆನಪಿನಲ್ಲಿ ನೀಡುವ ಈ ಪ್ರಶಸ್ತಿಗೆ ತುಳು ಕಾದಂಬರಿಯ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದು. ಹಸ್ತಪತ್ರ ಇದುವರೆಗೆ ಎಲ್ಲೂ ಮುದ್ರಿತಗೊಂಡಿರಬಾರದು ಹಾಗೂ ಯಾವುದೇ ಬಹುಮಾನಕ್ಕೆ ಆಯ್ಕೆಯಾಗಿರಬಾರದು. ಹಸ್ತಪ್ರತಿಗಳು ಸುಂದರವಾದ ಕೈಬರಹ, ಬೆರಳಚ್ಚು ಅಥವಾ ಕಂಪ್ಯೂಟರ್ ಮುದ್ರಿತ (ಡಿಟಿಪಿ) ರೂಪದಲ್ಲಿರಬೇಕು. ಕಾದಂಬರಿಯು ತುಳುನಾಡಿನ ಭೌಗೋಳಿಕ ಚಿತ್ರಣ, ತುಳು ಸಂಸ್ಕೃತಿಯನ್ನು ಬಿಂಬಿಸುವ ಅಂಶಗಳಿಂದ ಕೂಡಿದ್ದು, ಪೌರಾಣಿಕ, ಐತಿಹಾಸಿಕ, ಜಾನಪದ, ಸಾಮಾಜಿಕ ವಸ್ತುವನ್ನು ಆಧರಿಸಿರಬಹುದು. ಪ್ರಶಸ್ತಿಯು 8,000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಹಸ್ತಪ್ರತಿಯನ್ನು ಮೇ 10ರೊಳಗೆ ಪ್ರಕಾಶ್ ಸುವರ್ಣ ಕಟಪಾಡಿ, ಸಂಚಾಲಕರು, ಪಣಿಯಾಡಿ ಕಾದಂಬರಿ ಪ್ರಶಸ್ತಿ, ಯಶಸ್, ಕೋಟೆಬೀಡಿನ ಬಳಿ ಕೋಟೆ, ಕಟಪಾಡಿ ಅಂಚೆ ಉಡುಪಿ ಜಿಲ್ಲೆ- 574105 ಈ ವಿಳಾಸಕ್ಕೆ ಕಳುಹಿಸಿಕೊಡಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9964019229, 9880059298ನ್ನು ಸಂಪರ್ಕಿಸಬಹುದು ಎಂದು ತುಳುಕೂಟದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News