ಎ.30ರಂದು 2ನೆ ಸುತ್ತಿನ ಪಲ್ಸ್ ಪೋಲಿಯೊ

Update: 2017-04-24 18:38 GMT

ಉಡುಪಿ, ಎ.24: ಜಿಲ್ಲೆಯಲ್ಲಿ ಎ.30ರಂದು ಎರಡನೆ ಸುತ್ತಿನ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮೊದಲ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಶೇ.100ರಷ್ಟು ಗುರಿ ಸಾಧನೆಯಾಗಿದೆ. ಯಾವುದೇ ಮಗು ಪೋಲಿಯೊ ಲಸಿಕೆಯಿಂದ ವಂಚಿತವಾಗದಂತೆ ಕಾರ್ಯನಿರ್ವಹಿಸುವಂತೆ ಹಾಗೂ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಹೆಚ್ಚಿನ ಗಮನಹರಿಸುವಂತೆ ಅವರು ಸೂಚಿಸಿದರು.

ಅಲ್ಲದೆ ಎಲ್ಲ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಎ.30ರಂದು ಬೆಳಗ್ಗೆ 8 ಗಂಟೆಗೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದು ಡಿಎಚ್‌ಒ ಡಾ.ರೋಹಿಣಿ ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News