70 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಶಂಕುಸ್ಥಾಪನೆ

Update: 2017-04-24 18:40 GMT

ಹಾಸನ, ಎ.24: ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಸುಮಾರು 70 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.

12 ವರ್ಷಗಳಿಗೊಮ್ಮ ಶ್ರವಣಬೆಳಗೊಳದಲ್ಲಿ ನಡೆಯುವ ವೈವಾಗ್ಯ ಮೂರ್ತಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ವಿಶ್ವವಿಖ್ಯಾತಿ ಪಡೆದಿರುವ ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ, ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಈಗಾಗಲೇ ಬಜೆಟ್‌ನಲ್ಲಿ 175 ಕೋಟಿ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಅನುದಾನದ ಬೇಡಿಕೆ ಇಡಲಾಯಿತು. ಆದರೆ ಅದನ್ನು ತಿರಸ್ಕರಿಸಲಾಗಿದೆ. ಮತ್ತೊಮ್ಮೆ ಕೇಂದ್ರಕ್ಕೆ ನಿಯೋಗ ತೆರಳಿ ಹೆಚ್ಚಿನ ಅನುದಾನ ನೀಡುವಂತೆ ಒತ್ತಡ ಹೇರಲಾಗುವುದು. ಮಹಾಮಸ್ತಕಾಭಿಷೇಕ ಸಂದರ್ಭ ಹೊರ ರಾಜ್ಯ ಮತ್ತು ವಿದೇಶಗಳಿಂದ ಲಕ್ಷಾಂತರ ಮಂದಿ ಆಗಮಿಸಲಿದ್ದು, ಅವರೆಲ್ಲರಿಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹಾಗೂ ಜಿಲ್ಲೆಯ ಸಂಸದ ಎಚ್.ಡಿ ದೇವೇಗೌಡ, ಗೃಹ ಸಚಿವ ಜಿ. ಪರಮೇಶ್ವರ್, ಮುಜರಾಯಿ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು, ಶ್ತ್ರೀ ಕ್ಷೇತ್ರದ ಪೀಟಾಧ್ಯಕ್ಷರಾದ ಚಾರುಕೀರ್ತಿ ಟ್ಟಾರಕ ಮಹಾ ಸ್ವಾಮೀಜಿ, ಶಾಸಕರಾದ ಎಚ್. ಡಿ ರೇವಣ್ಣ, ಸಿ.ಎನ್ ಬಾಲ ಕೃಷ್ಣ, ಕೆ.ಎವ್ ಶಿವಲಿಂಗೇಗೌಡ, ಎಚ್.ಕೆ ಮುಕಾರಸ್ವಾಮಿ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News