ಹಾಸನ: 7ನೆ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಧರಣಿ

Update: 2017-04-25 17:40 GMT

ಹಾಸನ, ಎ.25: 7ನೆ ವೇತನ ಆಯೋಗದ ಶಿಫಾರಸುಗಳನ್ನು ಎಲ್ಲಾ ರಾಜ್ಯಗಳಲ್ಲಿ ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಹಾವೀರ ವೃತ್ತದ ಬಳಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಯಿತು.

2004ರಿಂದ ಈ ದೇಶದ ನೌಕರರಿಗೆ ಮತ್ತು ಶಿಕ್ಷಕರಿಗೆ ಜಾರಿಗೆ ತರಲಾಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಲು ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಸರಕಾರ ಹಳೆಯ ಪಿಂಚಣಿ ಯೊಜನೆಯನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ ಸಂಗತಿ ಎಂದು ಧರಣಿ ನಿರತರು ಹೇಳಿದರು.

ಧರಣಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಚ್. ಅಣ್ಣೇಗೌಡ, ಪ್ರಧಾನ ಕಾರ್ಯದರ್ಶಿ ದಾಕ್ಷಾಯಿಣಿ, ಉಪಾಧ್ಯಕ್ಷ ಷಾನುಲ್ಲಾ, ಸುಮಿತ್ರ, ಖಜಾಂಚಿ ಕೆ.ಬಿ. ರಾಜಶೆಟ್ಟಿ, ಸಹಕಾರ್ಯದರ್ಶಿ ಲಕ್ಮಣ್, ವತ್ಸಲಶೇಖರ್, ಸಂಘಟನಾ ಕಾರ್ಯದರ್ಶಿ ಎ.ಜೆ. ವೆಂಕಟೇಶ್, ಪ್ರಭಾವತಿ ಹಾಗೂ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಪ್ಪ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News