ಕೇಂದ್ರ ಸರಕಾರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಪ್ರತಿಭಟನೆ

Update: 2017-04-25 18:06 GMT

ದಾವಣಗೆರೆ, ಎ.25: ಕೇಂದ್ರ ಸರಕಾರದ ಹಿಂದಿ ಹೇರಿಕೆ ನೀತಿ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಮಹಿಳಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜಯದೇವ ವೃತ್ತದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷೆ ಎನ್.ಎಸ್. ಸುವರ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು ಕೇಂದ್ರ ಸರಕಾರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಸಂಘದ ಸುವರ್ಣ ಮಾತನಾಡಿ, ಹಿಂದಿ ಹೇರಿಕೆಯನ್ನು ತಕ್ಷಣ ಕೇಂದ್ರ ಸರಕಾರ ನಿಲ್ಲಿಸಬೇಕು. ಕನ್ನಡಿಗರ ಮೇಲೆ ಹಿಂದಿ ಹೇರುವ ಪ್ರಯತ್ನವನ್ನು ಕರವೇ ತೀವ್ರ ಖಂಡಿಸುತ್ತದೆ. ಶಾಲೆಗಳಲ್ಲಿ ನಮ್ಮ ರಾಷ್ಟ್ರಭಾಷೆ ಹಿಂದಿ ಎಂದು ಸುಳ್ಳುಹೇಳಿ, ಕನ್ನಡದ ಬಗ್ಗೆ ಕೀಳರಿಮೆ ಹುಟ್ಟು ಹಾಕುವುದನ್ನು ಸಹಿಸೆವು ಎಂದರು.

ನಂತರ ಜಿಲ್ಲಾಡಳಿತದ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು. ಪ್ರತಿಭಟನೆಯಲ್ಲಿ ವೇದಿಕೆಯ ಟಿ. ಲಲಿತಮ್ಮ, ಎಂ. ಅನುಸೂಯ, ಮೀನಾಕ್ಷಮ್ಮ, ರಿಯಾಝ್, ಆರ್. ಆಂಜನೇಯ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News