2 ಸಾವಿರ ರೂ. ಲಂಚದ ಕೇಳಿದ ಅಧಿಕಾರಿ ಎಸಿಬಿ ಬಲೆಗೆ

Update: 2017-04-25 18:13 GMT

ದಾವಣಗೆರೆ, ಎ.25: ಗಂಗಾಕಲ್ಯಾಣ ಯೋಜನೆಗೆ ಆಯ್ಕೆಯಾಗಿದ್ದ ಫಲಾನುಭವಿಗೆ ದಾಖಲೆ ಪರಿಶೀಲಿಸಲು 2 ಸಾವಿರ ರೂ. ಲಂಚದ ಕೇಳಿದ ಅಧಿಕಾರಿ ಎಸಿಬಿ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಫೀಲ್ಡ್ ಆಫೀಸರ್ ದಾಮೋದರ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ಹರಪನಹಳ್ಳಿ ತಾಲೂಕಿನ ಕುಂಚೂರು ತಾಂಡದ ನಾಗಾನಾಯ್ಕ ಎಂಬವರು ಈ ಹಿಂದೆ ಗಂಗಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿ, ಪ್ರಸ್ತುತ ಯೋಜನೆಗೆ ಈ ಆಯ್ಕೆಯಾಗಿದ್ದರು. ಅವರ ದಾಖಲೆ ಪರಿಶೀಲನೆಗೆ ದಾಮೋದರ್ 2 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾಗಾನಾಯ್ಕ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಮಂಗಳವಾರ ಲಂಚ ನೀಡುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಎಸಿಬಿ ಡಿವೈಎಸ್ಪಿ ಕವಳಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪ್ರಕಾಶ್, ಮೋಹನ್, ಕಲ್ಲೇಶ್, ಮಾರುತಿ, ಧನ್‌ರಾಜ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News