​ಮುಸ್ಲಿಮ್ ವೈಯಕ್ತಿಕ ಕಾನೂನು ಜಾಗೃತಿ ಅಭಿಯಾನ

Update: 2017-04-25 18:25 GMT

ಉಡುಪಿ, ಎ.25: ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮುಸ್ಲಿಮ್ ವೈಯಕ್ತಿಕ ಕಾನೂನು ಜಾಗೃತಿ ಅಭಿಯಾನದ ಪ್ರಯುಕ್ತ ಉಡುಪಿ ಜಿಲ್ಲೆಯಾದ್ಯಂತ ಮನೆಮನೆಗಳಿಗೆ ಭೇಟಿ ನೀಡಿ ಈ ಕಾನೂನಿನ ಅರಿವು ಮೂಡಿಸುವ ಕಾರ್ಯ ಮಾಡಲಾಗುವುದು ಎಂದು ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಜಿಲ್ಲಾ ಸಂಚಾಲಕಿ ಹುಮೈರಾ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.23ರಿಂದ ಆರಂಭಗೊಂಡಿರುವ ಈ ಅಭಿಯಾನವು ಮೇ7ರವರೆಗೆ ನಡೆಯ ಲಿದೆ. ಇದರ ಅಂಗವಾಗಿ ಎ.27ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ಜಾಮೀಯ ಮಸೀದಿಯಲ್ಲಿ ಮುಸ್ಲಿಮ್ ಮಹಿಳೆಯ ಸಮಾವೇಶವನ್ನು ಆಯೋಜಿಸಲಾಗಿದ್ದು, ಇದರಲ್ಲಿ ಬೆಂಗಳೂರಿನ ಅಮತುರ್ರಝಾಕ್ ಭಾಗವಹಿಸಲಿರುವರು ಎಂದು ಹೇಳಿದರು.

ಮುಸ್ಲಿಮ್ ವೈಯಕ್ತಿಕ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅದರ ದುರ್ಬಳಕೆಯಿಂದ ಮಹಿಳೆಯರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಸಂಪೂರ್ಣ ಶರೀಯತ್ ಪ್ರಕಾರ ಜೀವನವನ್ನು ಸಾಗಿಸಿದರೆ ಶಾಂತಿ ಮತ್ತು ನೆಮ್ಮದಿ ದೊರೆಯಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ವಿಭಾಗದ ಉಡುಪಿ ಸ್ಥಾನೀಯ ಸಂಚಾಲಕಿ ಶಾಹಿದ ರಿಯಾಝ್, ಸದಸ್ಯೆ ಕುಲ್‌ಸೂಮ್ ಅಬೂಬಕ್ಕರ್, ಮೆಹ್ರ್‌ರುನ್ನೀಸ, ಜಮೀಲಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News