​ಕೊಯ್ಲ: ಮದುವೆ ಮನೆಯಿಂದ ಲಕ್ಷಾಂತರ ಮೌಲ್ಯದ ಸೊತ್ತು ಕಳವು

Update: 2017-04-26 05:01 GMT

ಕಡಬ, ಎ.26: ಮದುವೆ ಮನೆಯೊಂದಕ್ಕೆ ರಾತ್ರಿ ನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯ್ಲ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಆದಂ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆ ಮಂದಿ ನಿದ್ರಿಸುತ್ತಿದ್ದ ವೇಳೆ ನುಗ್ಗಿರುವ ಕಳ್ಳರು ನಗದು, ಚಿನ್ನಾಭರಣ ಸಹಿತ 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದಿದ್ದಾರೆ ಎಂದು ಹೇಳಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿರುವ ಕಡಬ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News