ಎ.28, 29ರಂದು ಆಳ್ವಾಸ್‍ನಲ್ಲಿ `ಸರ್ಗಧಾರಾ' ಸ್ಪರ್ಧೆ
ಮೂಡುಬಿದಿರೆ, ಎ.26: ಮಿಜಾರು ಶೋಭವನದಲ್ಲಿರುವ ಆಳ್ವಾಸ್ ಹೋಮಿಯೋಪಥಿ ಕಾಲೇಜಿನಲ್ಲಿ "ಸರ್ಗಧಾರಾ" ಅಂತರ್ ಕಾಲೇಜು ಹೋಮಿಯೋಪಥಿ ವಿಭಾಗದ ವಿದ್ಯಾರ್ಥಿಗಳ ಸ್ಪರ್ಧೆಗಳನ್ನು ಎ.28 ಹಾಗೂ 29ರಂದು ಆಯೋಜಿಸಲಾಗಿದೆ ಎಂದು ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಪ್ರವೀಣ್ ರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ ಎ.28ರಂದು ಬೆಳಗ್ಗೆ 9 ಗಂಟೆಗೆ ಸಮಾವೇಶ ಉದ್ಘಾಟನೆಗೊಳ್ಳಲಿದೆ. ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ , ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಗಳಾಗಿರುವರು. ಎ.29ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿರುವರು.
ಹೋಮಿಯೋಪಥಿ ಸಂಶೋಧನಾ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಸಹಿತ 20 ವಿವಿಧ ಹೋಮಿಯೋಪಥಿ ಔಷಧಿ ತಯಾರಿಕಾ ಕಂಪೆನಿಗಳ 10 ಮಳಿಗೆಗಳಲ್ಲಿ ಪ್ರದರ್ಶನ ನಡೆಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಗೋವಾದ 15 ವೈದ್ಯಕೀಯ ಕಾಲೇಜಿನ ಸುಮಾರು 200 ವಿದ್ಯಾರ್ಥಿಗಳು ಸೇರಿದಂತೆ ಆಳ್ವಾಸ್ ಹೋಮಿಯೋಪಥಿ ಕಾಲೇಜಿನ 350 ವಿದ್ಯಾರ್ಥಿಗಳು ಪಾಲ್ಗೊಳ್ಳಲಿರುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಉಪ ಪ್ರಾಂಶುಪಾಲ ರೋಶನ್ ಪಿಂಟೊ, ಸಂಘಟನಾ ಕಾರ್ಯದರ್ಶಿ ಡಾ.ಖಾದ್ರಿ, ಕಾಲೇಜಿನ ಸಹ ಆಡಳಿತಾಧಿಕಾರಿ ಗ್ಲಾಡ್ಸನ್ ಜೋಸೆಫ್, ಡಾ.ಪ್ರಜ್ಞಾ ಆಳ್ವ, ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕರಾದ ಸ್ವಸ್ತಿಕ್ ಜೈನ್, ಫೆಬಿನ್, ಕೃತಿ ಉಪಸ್ಥಿತರಿದ್ದರು.