ಸ್ವಾಲಿಹ್
Update: 2017-04-26 21:21 IST
ಮಂಗಳೂರು, ಎ. 26: ಬೋಳಾರ ಜುಮಾ ಮಸೀದಿ ಸಮಿತಿ ಸದಸ್ಯ, ಎಮ್ಮೆಕೆರೆ ನಿವಾಸಿ ಸ್ವಾಲಿಹ್ (73) ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು.
ಎದೆ ನೋವು ಕಾಣಿಸಿಕೊಂಡಿದ್ದರಿಂದ ರಾತ್ರಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಇಬ್ಬರನ್ನು ಪುತ್ರರನ್ನು ಅಗಲಿದ್ದಾರೆ.
ಹಲವು ವರ್ಷಗಳಿಂದ ವರದಕ್ಷಿಣೆ ವಿರೋಧಿ ಸಮಿತಿಯಲ್ಲಿ ಸಕ್ರಿಯರಾಗಿದ್ದ ಅವರು ವರದಕ್ಷಿಣೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಬೋಳಾರ ಜುಮಾ ಮಸೀದಿ ಸಮಿತಿಯಲ್ಲಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯು ಬುಧವಾರ ಲುಹ್ರ್ ನಮಾಝಿನ ಬಳಿಕ ಬೋಳಾರ ಜುಮಾ ಮಸೀದಿಯಲ್ಲಿ ನಡೆಯಿತು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.