×
Ad

ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ

Update: 2017-04-26 23:28 IST

ಉಡುಪಿ, ಎ.26: ಛತ್ತಿಸ್‌ಗಡ್‌ನಲ್ಲಿ ನಕ್ಸಲ್ ದಾಳಿಯಿಂದ ಹುತಾತ್ಮರಾದ ವೀರ ಯೋಧರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಗಾಂಧಿ ಪ್ರತಿಮೆಯ ಎದುರು ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಮಾತನಾಡಿ, ಈ ದಾಳಿಯು ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಸೈನಿಕರ ಹೆಸರು ಹೇಳಿಕೊಂಡು ರಾಜಕೀಯ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಿಂದ ಯೋಧರಿಗೆ ಭದ್ರತೆ ಇಲ್ಲವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ, ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನಾಯಕಿ ಜ್ಯೋತಿ ಹೆಬ್ಬಾರ್ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜನಾರ್ದನ ಭಂಡಾರ್ಕರ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಹರೀಶ್ ಕಿಣಿ, ಮುರಳಿ ಶೆಟ್ಟಿ, ಚಂದ್ರಿಕಾ ಶೆಟ್ಟಿ, ದಿನೇಶ್ ಪುತ್ರನ್, ಉದ್ಯಾವರ ನಾಗೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News