ಜನವಾದಿ ಸಂಘಟನೆಯಿಂದ ತಾಪಂ ಕಚೇರಿಗೆ ಮುತ್ತಿಗೆ

Update: 2017-04-26 18:17 GMT

ಮಂಡ್ಯ, ಎ.26: ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರುವಂತೆ ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಬುಧವಾರ ಮದ್ದೂರು ತಾಲೂಕು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಲಾಯಿತು.

ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಕೆಲಸ ನೀಡುತ್ತಿಲ್ಲ. ಮಾಡಿದ ಕೆಲಸಗಳಿಗೆ ಕೂಲಿ ಕೊಡುತ್ತಿಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ದೇವಿ ಮಾತನಾಡಿ, ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ. ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಮಳೆಯೂ ಇಲ್ಲ, ಬೆಳೆಯೂ ಇಲ್ಲ. ದುಡಿಯುವ ಕೈಗೆ ಕೆಲಸವಿಲ್ಲದಂತಾಗಿದೆ ಎಂದರು. ಜೀವನಕ್ಕೆ ಆಸರೆಯಾಗಬೇಕಾದ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಜನಸಾಮಾನ್ಯರಿಗೆ ಕೆಲಸ ಸಿಗುತ್ತಿಲ್ಲ. ಸ್ಥಳೀಯ ಅಧಿಕಾರಿಗಳಿಗೆ ಉದ್ಯೋಗ ಖಾತ್ರಿ ಅಡಿಯಲ್ಲಿ ಕೆಲಸ ಕೇಳಿ ಅರ್ಜಿ ಸಲ್ಲಿಸಿ ಒಂದೂವರೆ ತಿಂಗಳಾಗಿದ್ದರೂ ಕೆಲಸ ಕೊಡುತ್ತಿಲ್ಲ ಎಂದು  ಆರೋಪಿಸಿದರು.

ತಾಪಂ ಇಒ  ಡಾ.ಕೃಷ್ಣಮೂರ್ತಿಯವರಿಗೆ ಮನವಿ ಪತ್ರ ಸ್ವೀಕರಿಸಿದರು. ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸುನೀತಾ, ತಾಲೂಕು ಅಧ್ಯಕ್ಷೆ ಡಿ.ಕೆ.ಲತಾ, ಕಾರ್ಯದರ್ಶಿ ಶೋಭಾ, ಅನಿತಾ, ಶೋಭಮ್ಮ, ಕಾಳಮ್ಮ, ಚೆನ್ನಮ್ಮ, ರತ್ನಮ್ಮ, ಚಿನ್ನಮ್ಮ, ಭಾಗ್ಯಮ್ಮ, ರಾಜಮ್ಮ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News