ಎ.29ರಂದು ಬಿಐಟಿ- ಬೀಡ್ಸ್ ನಿಂದ ಪ್ರತಿಭಾನ್ವೇಷಣೆ ಪರೀಕ್ಷೆ
ಮಂಗಳೂರು, ಎ.27: ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಮತ್ತು ಬ್ಯಾರೀಸ್ ಎನ್‌ವಿರೋ ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (ಬೀಡ್ಸ್) ವತಿಯಿಂದ 2017ನೆ ಶೈಕ್ಷಣಿಕ ವರ್ಷದಲ್ಲಿ ಇಂಜಿನಿಯರಿಂಗ್ ಅಥವಾ ಆರ್ಕಿಟೆಕ್ಚರ್ ವಿಭಾಗಕ್ಕೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣೆ ಪರೀಕ್ಷೆಯನ್ನು ಆಯೋಜಿಸುತ್ತಿದೆ.
ಎಪ್ರಿಲ್ 29ರಂದು ಈ ಪ್ರತಿಭಾನ್ವೇಷಣೆ ಪರೀಕ್ಷೆ ನಡೆಯಲಿದೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ಪ್ರತಿಭಾನ್ವಿತ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣೆಯಲ್ಲಿ ತೋರಿದ ನಿರ್ವಹಣೆ ಮೇಲೆ ಶೇ. 100ರಷ್ಟು ವಿದ್ಯಾರ್ಥಿ ವೇತನವನ್ನು ಒದಗಿಸಲಾಗುವುದು. ಒಂದು ತಿಂಗಳ ಉಚಿತ ಸಿಇಟಿ/ ನೀಟ್ ಕೋಚಿಂಗ್, ವೃತ್ತಿ ಮಾರ್ಗದರ್ಶನ, ಪ್ರತಿಭಾನ್ವೇಷಣೆ ಮತ್ತು ವಿದ್ಯಾರ್ಥಿವೇತನ ಕಾರ್ಯಕ್ರಮದ ಮೂಲಕ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ. ಬ್ಯಾರೀಸ್ ಅಕಾಡಮಿ ಆಫ್ ಲರ್ನಿಂಗ್ ಸಂಸ್ಥೆಯ ಈ ಸಾಮಾಜಿಕ ಕಳಕಳಿಯ ಕಾರ್ಯಕ್ರಮದಿಂದ ಸುಮಾರು 300 ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆದಿದ್ದಾರೆ.
ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳು 10ನೆ ತರಗತಿಯ ಅಂಕ ಪಟ್ಟಿ ಮತ್ತು ಪಾಸ್‌ಪೋರ್ಟ್ ಸೈಝ್‌ನ ಫೋಟೋವನ್ನು ತರಬೇಕು. ಅಂದು ಬೆಳಗ್ಗೆ 9 ಗಂಟೆಗೆ ಇನೋಳಿಯ ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಾಜರಿರಬೇಕು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ಕರ್ನಾಟಕ ರಾಜ್ಯ ಮತ್ತು ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ