ಅಂಬೇಡ್ಕರ್ ವಿಶ್ವದ ಮಹಾಜ್ಞಾನಿ : ಆರ್. ಧ್ರುವನಾರಾಯಣ

Update: 2017-04-28 15:02 GMT

ಚಾಮರಾಜನಗರ, ಎ.28 : ವಿಶ್ವದಲ್ಲೇ ಅತೀ ಶ್ರೇಷ್ಠ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ಮಹಾಜ್ಞಾನಿ ಎಂದು ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ ಅಭಿಪ್ರಾಯಪಟ್ಟರು.

ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದೇಶದಲ್ಲೂ ಅಧ್ಯಯನ ಮಾಡಿ ಅಪಾರ ಪಾಂಡಿತ್ಯ ಪಡೆದಿದ್ದ ಅಂಬೇಡ್ಕರ್ ಅವರಿಗೆ ವಿದೇಶದಲ್ಲೇ ಉನ್ನತ ಹುದ್ದೆ ಅಲಂಕರಿಸಿ ಇರುವ ಅವಕಾಶಗಳೂ ಇದ್ದವು. ಆದರೆ ಶೋಷಿತ ಸಮುದಾಯದ ಪರ ಹೋರಾಟ ನಡೆಸಿ ತಳವರ್ಗ ಸೇರಿದಂತೆ ಎಲ್ಲರ ಪರವಾಗಿ ಕಾಳಜಿ ತೋರಿಸಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರ ಜೀವನವೇ ತೆರೆದ ಪುಸ್ತಕವಾಗಿದೆ ಎಂದರು.

ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಮಾತನಾಡಿ, ಎಲ್ಲರೂ ಸ್ವಾಭಿಮಾನಿ, ಸ್ವಾವಲಂಬಿಗಳಾಗಿ ಬದುಕಬೇಕು, ಎಲ್ಲ ಹುದ್ದೆಗಳು ಸೇರಿದಂತೆ ಸಮಾಜದಲ್ಲಿ ಸಮಾನತೆ ಇರಬೇಕೆಂಬ ಆಶಯದಿಂದ ಅಂಬೇಡ್ಕರ್ ಸಂವಿಧಾನ ರಚಿಸಿದರು. ಅವರ ಉದ್ದೇಶಗಳನ್ನು ಸಾಕಾರಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಸಮಾಜದ ತಾರತಮ್ಯವನ್ನು ಹೋಗಲಾಡಿಸಿ ಸರ್ವರಿಗೂ ಅವಕಾಶಗಳು ಲಭಿಸಬೇಕೆಂಬ ನಿಟ್ಟಿನಲ್ಲಿ ಶ್ರಮಿಸಿದ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್. ಅವರ ಅಪಾರಜ್ಞಾನ ಮಾರ್ಗದ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದರು.

ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಬಿಕ್ಕುಗಳಾದ ಬೋಧರತ್ನ ಬಂತೇಜಿ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆ ಆಶಯ ಅನುಸಾರ ನಡೆಯಬೇಕಿದೆ. ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಿದರೆ ಮಾತ್ರ ಅಂಬೇಡ್ಕರ್ ಜಯಂತಿ ಆಚರಣೆಗೂ ಗೌರವ ಸೂಚಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶಾಸಕರಾದ ಎಂ.ಸಿ. ಮೋಹನಕುಮಾರಿ ಮಾತನಾಡಿದರು. ಕೆ.ಆರ್. ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರಾದ ಡಾ.ಎಚ್.ಡಿ. ಉಮಾಶಂಕರ್ ಮುಖ್ಯ ಭಾಷಣ ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ. ರಾಮಚಂದ್ರ ಚಾಲನೆ ನೀಡಿದರು.

ಸಮಾರಂಭದ ಸ್ಥಳದ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನ ನಡೆಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನಾವಳಿಗಳನ್ನು ತಿಳಿಸುವ ಉದ್ದೇಶದಿಂದ ಮೈಸೂರಿನ ಕ್ರಿಯಾ ಟುವರ್ಡ್ಸ್ ಸೊಸೈಟಿ ಅಂಬೇಡ್ಕರ್ ಅವರ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿತ್ತು. 

ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಜಯಣ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾಮಂಡಳಿಯ ಅಧ್ಯಕ್ಷ ಎಂ.ಚಿನ್ನಸ್ವಾಮಿ, ಕಾಡಾ ಅಧ್ಯಕ್ಷ ಎಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುಹೇಲ್ ಅಲಿಖಾನ್, ನಗರಸಭೆ ಅಧ್ಯಕ್ಷ ಎಸ್.ಎನ್. ರೇಣುಕಾ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾ.ಪಂ. ಅಧ್ಯಕ್ಷ ಎಚ್.ವಿ. ಚಂದ್ರು. ಉಪಾಧ್ಯಕ್ಷ ಪಿ.ಎನ್. ದಯಾನಿಧಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕೆ. ಬೊಮ್ಮಯ್ಯ, ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ಆರ್. ಬಾಲರಾಜು, ಮರುಗದಮಣಿ, ಬಾಲರಾಜು, ಚನ್ನಪ್ಪ, ಉಮಾವತಿ, ಚಂದ್ರಕಲಾ, ಜಯಂತಿ, ಶಿವಮ್ಮ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News