ವಿದ್ಯಾರ್ಥಿ ಶಿವಕುಮಾರ್ ಅವರ ಎರಡು ಕೃತಿಗಳ ಬಿಡುಗಡೆ
ಉಡುಪಿ, ಎ.28: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ದ್ವಿತೀಯ ವರ್ಷದ ಕನ್ನಡ ಎಂ.ಎ. ವಿದ್ಯಾರ್ಥಿ ಶಿವಕುಮಾರ್ ಅವರ ಎರಡು ಕೃತಿಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ‘ಮುನ್ನುಡಿ’ ಹಾಗೂ ‘ಮಹೀಂದ್ರ ಮಹಾಭಿಷ’ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದರು.
ಪುಸ್ತಕಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಅವರು ಶಿವಕುಮಾರ್‌ರನ್ನು ಸನ್ಮಾನಿಸಿದರು. ಕನ್ನಡದ ಪ್ರಸಿದ್ಧ ವಿದ್ವಾಂಸ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಪಾದೇಕಲ್ಲು ವಿಷ್ಣುಟ್ ಯಕ್ಷಗಾನ ಕೃತಿ ಮಹೀಂದ್ರ ಮಹಾಭಿಷದ ಬಗ್ಗೆ ಮಾತನಾಡಿದರು.
ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎಚ್.ಕೆ. ವೆಂಕಟೇಶ ಮುನ್ನುಡಿಯ ಅವಲೋಕನ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ವಿಭಾಗ ಮುಖ್ಯಸ್ಥ ಪ್ರೊ. ಪ್ರಸಾದ್ ರಾವ್ ಶುಭ ಹಾರೈಸಿದರು.
ಕನ್ನಡ ಸಹ ಪ್ರಾಧ್ಯಾಪಕಿ ಡಾ.ನಿಕೇತನ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಚಂದನಾ ಕೆ. ಎಸ್. ವಂದಿಸಿದರು