ಮೇ 2ರ ಮಂಗಳೂರು ಚಲೋ ಯಶಸ್ಸಿಗೆ ಕರೆ
Update: 2017-04-28 23:14 IST
ಮಂಗಳೂರು, ಎ.28: ದ.ಕ.ಜಿಲ್ಲಾ ಮುಸ್ಲಿಂ ಸಂಘಟನೆಗಳ ಆಶ್ರಯದಲ್ಲಿ ಮೇ 2ರಂದು ನಗರದ ನೆಹರೂ ಮೈದಾನದಲ್ಲಿ ನಡೆಯುವ ಮಂಗಳೂರು ಚಲೋ ಮುಸ್ಲಿಂ ಸಮಾವೇಶವನ್ನು ಯಶಸ್ವಿಗೊಳಿಸಲು ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಕರೆ ನೀಡಿದ್ದಾರೆ.
ಮುಸ್ಲಿಂ ಸಮುದಾಯದ ಐಕ್ಯತೆಯ ಪ್ರದರ್ಶನ ಇದಾಗಿದ್ದು, ವಿವಿಧ ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು, ನಾಯಕರು, ಧರ್ಮಗುರುಗಳು ಭಾಗವಹಿಸಲಿದ್ದಾರೆ. ಅಹ್ಮದ್ ಖುರೇಷಿ ಮೇಲೆ ನಡೆದ ದೌರ್ಜನ್ಯ ಮತ್ತು ಶೋಷಣೆಯ ಬಗ್ಗೆ ಈ ಸಮಾವೇಶದಲ್ಲಿ ಚರ್ಚಿಸಿ ಸಮುದಾಯದ ಐಕ್ಯತೆ, ಭದ್ರತೆ, ರಕ್ಷಣೆಯ ವಿಷಯದಲ್ಲಿ ನಿರ್ಣಯ ಕೈಗೊಳ್ಳಲಾಗುವುದು. ಈ ಕಾರ್ಯಕ್ರಮವು ಕಾನೂನು ಸುವ್ಯವಸ್ಥೆಗೆ ಪೂರಕವಾಗಿ, ಪ್ರಜಾಸತ್ತಾತ್ಮಕವಾಗಿ, ಶಾಂತಿಯುತವಾಗಿ ನಡೆಯಲಿದೆ ಎಂದು ಅಶ್ರಫ್ ಪ್ರಕಟನೆಯಲ್ಲಿ ಸ್ಪಷ್ಪಪಡಿಸಿದ್ದಾರೆ.