×
Ad

ಸಾಲಬಾಧೆ:ರೈತ ಆತ್ಮಹತ್ಯೆ

Update: 2017-04-29 21:18 IST

ಮಂಡ್ಯ, ಎ.29: ಸಾಲಬಾಧೆಯಿಂದ ತಾಲೂಕಿನ ವಳಗೆರೆಹಳ್ಳಿಯಲ್ಲಿ ರೈತನೊಬ್ಬ ಶನಿವಾರ ಬೆಳಗ್ಗೆ  ಜಮೀನಿನ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಮರೀಗೌಡ(62) ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ತನ್ನ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಭತ್ತ, ಕಬ್ಬು ಹಾಗೂ ರಾಗಿ ಬೆಳೆ ನೀರಿಲ್ಲದೆ ಒಣಗಿ ಹೋಗಿದ್ದವರು.

 ಕೃಷಿ ಚಟುವಟಿಕೆಗಾಗಿ ಶಿವಪುರದ ಎಸ್‌ಬಿಐ ಬ್ಯಾಂಕ್ ಶಾಖೆಯಲ್ಲಿ ಚಿನ್ನಾಭರಣ ಅಡಮಾನವಿಟ್ಟು 75 ಸಾವಿರ ರೂ., ಗಿರಿವಿ ಅಂಗಡಿಯಲ್ಲಿ ಒಡವೆಗಳನ್ನು ಅಡಮಾನವಿಟ್ಟು 1.5 ಲಕ್ಷ ರೂ. ಹಾಗೂ 3 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಸಾಲಗಾರರ ಕಿರುಕುಳ ಹೆಚ್ಚಾದ ಹಿನ್ನೆಲೆಯಲ್ಲಿ ಮರೀಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಟುಂಬದವರು ಮದ್ದೂರು ಪೊಲೀಸರಿಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News