ಹಂಚಿನಾಳದಲ್ಲಿ ಬೆಂಕಿ ದುರಂತ ; 25 ಮನೆಗಳು ಭಸ್ಮ
Update: 2017-04-30 12:36 IST
ಬೆಳಗಾವಿ, ಎ.30: ಬೆಳಗಾವಿ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 25ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿದೆ.
ಅಗ್ನಿ ದುರಂತದಲ್ಲಿ 25ಕ್ಕೂ ಹೆಚ್ಚು ಮೇವಿನ ಬಣವೆ, 14 ಜಾನುವಾರುಗಳು ಸುಟ್ಟು ಕರಕಲಾಗಿವೆ.
. ಮನೆಗಳಿಗೆ ಬೆಂಕಿ ಬಿದ್ದಿದ್ದರಿಂದ 25ಕ್ಕೂ ಹೆಚ್ಚು ಕುಟುಂಬಗಳು ಬೀದಿಪಾಲಾಗಿವೆ.ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಿಂದ ಆಗಮಿಸಿರುವ 10ಕ್ಕೂ ಹೆಚ್ಚು ಅಗ್ನಿ ಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.